ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿ ಸಾಕಷ್ಟು ಆ್ಯಪ್‌ಗಳಿರುತ್ತವೆ ಮತ್ತು ಕಾಲ ಕಾಲಕ್ಕೆ ಅವುಗಳಲ್ಲಿ ಹೊಸ ವೈಶಿಷ್ಟ್ಯಗಳು, ಭದ್ರತೆ ಒಳಗೊಂಡ ಪರಿಷ್ಕೃತ ಆವೃತ್ತಿಗಳು ಲಭ್ಯವಾಗುತ್ತವೆ. ಇಂಟರ್ನೆಟ್ ಸಂಪರ್ಕಗೊಂಡಾಗ ನಿರ್ದಿಷ್ಟ ‘ಆ್ಯಪ್‌ಗೆ ಅಪ್‌ಡೇಟ್‌ಗಳು ಲಭ್ಯ ಇವೆ’ ಎಂಬ ನೋಟಿಫಿಕೇಶನ್ ಬರುತ್ತದೆ. ನಿಮ್ಮಲ್ಲಿ ಅನ್‌ಲಿಮಿಟೆಡ್ ಡೇಟಾ (ಇಂಟರ್ನೆಟ್) ಪ್ಯಾಕ್ ಇದ್ದರೆ ತೊಂದರೆಯಿಲ್ಲ. ಆದರೆ ಸೀಮಿತ ನೆಟ್ ಪ್ಯಾಕ್ ಇದ್ದರೆ ಅವುಗಳು ಸ್ವಯಂಚಾಲಿತವಾಗಿ ಅಪ್‌ಡೇಟ್ ಆಗದಂತೆ ಮತ್ತು ನಮಗೆ ಬೇಕಾದಾಗಲಷ್ಟೇ ಇಲ್ಲವೇ ವೈಫೈ ಮೂಲಕ ಮಾತ್ರ ಅಪ್‌ಡೇಟ್ ಮಾಡಿಕೊಳ್ಳುವಂತೆ ಹೊಂದಿಸಿಕೊಳ್ಳಬಹುದು. ಇದಕ್ಕೆ ಮೊಬೈಲ್‌ನಲ್ಲಿ ಗೂಗಲ್ ಪ್ಲೇ ಸ್ಟೋರ್‌ಗೆ ಹೋಗಿ ಮೇಲ್ಭಾಗದಲ್ಲಿ ಮೂರು ಗೆರೆಗಳಿರುವ ಮೆನು ಐಕಾನ್ ಸ್ಪರ್ಶಿಸಿ, ಕೆಳಗೆ ಸೆಟ್ಟಿಂಗ್ಸ್ ಎಂದಿರುವಲ್ಲಿ ಕ್ಲಿಕ್ ಮಾಡಿ. Auto Update Apps ಎಂದಿರುತ್ತದೆ ಒತ್ತಿ, ನಿಮಗೆ ಬೇಕಾದ ಆಯ್ಕೆಗಳನ್ನು ಹೊಂದಿಸಿಕೊಳ್ಳಿ.
ಇವನ್ನೂ ನೋಡಿ
WhatsApp Tricks: ಬ್ಯಾಕ್ಅಪ್ ಮತ್ತು ಹೊಸ ಫೋನ್ಗೆ ವರ್ಗಾವಣೆ ಮಾಡುವುದು ಹೇಗೆ?
WhatsApp Tricks: ಸಂವಹನ ಆ್ಯಪ್ ಅಥವಾ ಸಾಮಾಜಿಕ ಮಾಧ್ಯಮದ ವಾಟ್ಸ್ಆ್ಯಪ್ ಅನ್ನು ಬಳಸುತ್ತಿರುವ ಬಹುತೇಕರಿಗೆ, ಫೋನ್ ಬದಲಾಯಿಸಬೇಕಾದಾಗ ಅದರಲ್ಲಿ ಬಂದಿರುವ ಪ್ರಮುಖ ಸಂದೇಶಗಳು, ಫೊಟೋ ಅಥವಾ ವಿಡಿಯೊಗಳನ್ನು ಕಳೆದುಕೊಳ್ಳಲು ಇಷ್ಟ ಇರುವುದಿಲ್ಲ. ಮುಂದಕ್ಕೂ ಉಪಯೋಗಕ್ಕೆ ಬರುವಂತಹ ಅವುಗಳನ್ನು ಕಾಯ್ದಿಟ್ಟುಕೊಳ್ಳಬೇಕು ಎಂದುಕೊಳ್ಳುವವರಿಗೆ ಇಲ್ಲಿದೆ ಸಲಹೆ.